alex Certify
ಕನ್ನಡ ದುನಿಯಾ       Mobile App
       

Kannada Duniya

ಆಷಾಢ ಮಾಸದ ಕೊನೆ ಶುಕ್ರವಾರ: ನಾಡ ಅಧಿದೇವತೆ ಚಾಮುಂಡಿಗೆ ವಿಶೇಷ ಪೂಜೆ

ಮೈಸೂರು: ಇಂದು ಆಷಾಢ ಮಾಸದ ಕೊನೆ ಶುಕ್ರವಾರ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ-ಸಂಭ್ರಮ ಮನೆಮಾಡಿದೆ. ಆಷಾಡ ಶುಕ್ರವಾರ ಹಿನ್ನಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಅಭಿಷೇಕ, ಕುಂಕುಮಾರ್ಚನೆಗಳು ನಡೆಯುತ್ತಿವೆ.

ದೇವಾಲಯ ಒಳ ಮತ್ತು ಹೊರಾವರಣ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದು, ದೇವಿ ದರ್ಶನಕ್ಕಾಗಿ ಭಕ್ತಾದಿಗಳು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಭಕ್ತರ ಅನುಕೂಲಕ್ಕಾಗಿ ಕೆ.ಎಸ್‍.ಆರ್.ಟಿ.ಸಿ. ಯಿಂದ ಉಚಿತ ಬಸ್ ಸೇವೆ ಕಲ್ಪಿಸಲಾಗಿದ್ದು, ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಚಾಮುಂಡಿ ಬೆಟ್ಟ-ಚಾಮುಂಡಿ ಬೆಟ್ಟದಿಂದ ಹೆಲಿಪ್ಯಾಡ್ ವರೆಗೆ ಉಚಿತ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...