alex Certify
ಕನ್ನಡ ದುನಿಯಾ       Mobile App
       

Kannada Duniya

ಸಮುದ್ರದಲ್ಲಿ ಮುಳುಗುತ್ತಿದ್ದ ಈರ್ವ ವಿದ್ಯಾರ್ಥಿಗಳ ರಕ್ಷಣೆ

ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡವೊಂದು ಈಜಲು ಸಮುದ್ರಕ್ಕಿಳಿದಿದ್ದು, ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಮುಳುಗಿದ್ದು, ಅವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜಿನ 7 ವಿದ್ಯಾರ್ಥಿಗಳ ತಂಡ ಗೋಕರ್ಣಕ್ಕೆ ಬಂದಿದ್ದು, ಈಜಾಡಲು ಸಮುದ್ರಕ್ಕಿಳಿದಿದ್ದಾರೆ. ಈ ವೇಳೆ ಉತ್ತರ ಪ್ರದೇಶದ ಕಮಲೇಶ್ ಕುಮಾರ್ ಹಾಗೂ ಮಧ್ಯಪ್ರದೇಶದ ರಮೇಶ್ ಯಾದವ್ ಎಂಬ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ.

ಜೊತೆಯಲ್ಲಿದ್ದ ಇತರೆ ವಿದ್ಯಾರ್ಥಿಗಳು ಕೂಗಿಕೊಂಡಿದ್ದು, ಸ್ಥಳದಲ್ಲಿದ್ದ ಲೈಫ್ ಗಾರ್ಡ್ ಸಿಬ್ಬಂದಿ ಕೂಡಲೇ ಸ್ಪೀಡ್ ಬೋಟ್ ನೊಂದಿಗೆ ಧಾವಿಸಿ ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಗೋಕರ್ಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...