alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಯರ ಚಪ್ಪಲಿಯಲ್ಲಿ ಚಿನ್ನ ಸಾಗಿಸುತ್ತಿದ್ದ ಖದೀಮ ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ರಾತ್ರಿ ಮುಂಬೈ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದ ವ್ಯಕ್ತಿ, ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಈತ ಯುವತಿಯರ ಉಡುಪು, ಚಪ್ಪಲಿ, ಆಭರಣಗಳಲ್ಲಿ ಚಿನ್ನವನ್ನು ಅಕ್ರಮವಾಗಿ ಅಡಗಿಸಿಟ್ಟು ಸಾಗಿಸುತ್ತಿದ್ದ.

ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಕಂಡು ಬಂದಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...