alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯನ ವೇಷದಲ್ಲಿ ಚಿನ್ನದ ಸರ ದೋಚಿದ್ದಾನೆ ಕಳ್ಳ

ಇದುವರೆಗೂ ದಾರಿಯಲ್ಲಿ ಹೋಗುತ್ತಿರುವ ಮಹಿಳೆಯರ ಚಿನ್ನದ ಮೇಲೆ ಕಣ್ಣಿಟ್ಟಿದ್ದ ಕಳ್ಳರು ಈಗ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆದಿರುವ ಘಟನೆ ಇದಕ್ಕೆ ಪುಷ್ಟಿ ನೀಡುವಂತಿದೆ.

ವೈದ್ಯನ ವೇಷದಲ್ಲಿ ಬಂದ ವಂಚಕನೊಬ್ಬ ತಪಾಸಣೆ ಹೆಸರಿನಲ್ಲಿ ಚಿನ್ನದ ಸರ ಎಗರಿಸಲು ಯತ್ನಿಸಿದ್ದು, ಒಂದು ಪ್ರಕರಣದಲ್ಲಿ ವಿಫಲನಾಗಿದ್ದರೆ ಮತ್ತೊಂದು ಪ್ರಕರಣದಲ್ಲಿ ಚಿನ್ನದ ಸರ ಎಗರಿಸಲು ಸಫಲನಾಗಿದ್ದಾನೆ.

ಪ್ರತಿಷ್ಟಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ವೈದ್ಯನ ವೇಷದಲ್ಲಿ ಠಾಕೂಠೀಕಾಗಿ ಬಂದವನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರನ್ನು ಪರೀಕ್ಷಿಸುವ ನೆಪದಲ್ಲಿ ಚಿನ್ನದ ಸರ ತೆಗೆಯುವಂತೆ ಹೇಳಿದ್ದಾನೆ. ಬಳಿಕ ಅದನ್ನು ತೆಗೆದುಕೊಂಡು ಪರಾರಿಯಾಗಿದ್ದು, ವಂಚಕ ನಕಲಿ ವೈದ್ಯನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...