alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಸಿಗರಿಗೆ ʼಸಿಹಿ ಸುದ್ದಿʼ ಕೊಟ್ಟ ರೈಲ್ವೇ ಇಲಾಖೆ

2008 ರಲ್ಲಿ ಆರಂಭಗೊಂಡಿದ್ದ ಗೋಲ್ಡನ್ ಚಾರಿಯೇಟ್ ರೈಲು ನಷ್ಟದಿಂದಾಗಿ ಸ್ಥಗಿತಗೊಂಡಿತ್ತು‌. ಆದರೆ ಇದೀಗ ಮತ್ತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗೋಲ್ಡನ್ ಚಾರಿಯೇಟ್ ರೈಲು ಓಡಾಡಲಿದೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ರೈಲ್ವೆ ಇಲಾಖೆಯ IRCTC ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಇಂದು ದೆಹಲಿಯ ರೈಲ್ವೆ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಡಂಬಡಿಕೆಗೆ ಸಹಿ ಮಾಡಲಾಯ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಮತ್ತು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಭಾಗಿಯಾಗಿದ್ದರು.

2020 ರ ಮಾರ್ಚ್ ನಿಂದ ರಾಜ್ಯದಲ್ಲಿ ಗೋಲ್ಡನ್ ಚಾರಿಯೇಟ್ ರೈಲು ಆರಂಭವಾಗಲಿದ್ದು, 18 ಕೋಚ್ ಮತ್ತು 44 ಅತಿಥಿ ಕೋಣೆ ಇರುವ ರೈಲು ಇದಾಗಿದೆ. ಇನ್ನು ಕರ್ನಾಟಕ ಮತ್ತು ದಕ್ಷಿಣ ಭಾರತದ ರಾಜ್ಯಗಳು ಹಾಗೂ ಬಂಡೀಪುರ, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹಂಪಿ, ಬಿಜಾಪುರದ ಪ್ರವಾಸಿ ತಾಣಗಳಲ್ಲಿ ಈ ರೈಲು ಓಡಾಡಲಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...