alex Certify
ಕನ್ನಡ ದುನಿಯಾ       Mobile App
       

Kannada Duniya

ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಿಯಲ್ಲೇ ಹೀಗಾಯ್ತಂತೆ..!?

ತುಮಕೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಗೊರವನಹಳ್ಳಿಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ದೇವಿಯ ದರ್ಶನ ಪಡೆದು ಕಾಣಿಕೆ ಸಲ್ಲಿಸಿ, ಹರಕೆ ತೀರಿಸುತ್ತಾರೆ.

ದೇವರ ಸನ್ನಿಧಿಗೆ ಬರುವ ಭಕ್ತರಿಗೆ ಪ್ರಸಾದ ನೀಡಲಾಗುತ್ತದೆ. ಆದರೆ, ಶುಕ್ರವಾರ ಮತ್ತು ಶನಿವಾರ ಕಾರ್ತೀಕ ದೀಪೋತ್ಸವದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಹಳಸಿದ ಅನ್ನಕ್ಕೆ ಸಾಂಬಾರ್ ಬೆರೆಸಿ ಪ್ರಸಾದವಾಗಿ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯಕ್ಕೆ ಹೆಚ್ಚಿನ ಆದಾಯ ಬರುತ್ತದೆ. ಭಕ್ತರಿಗೆ ಮಾತ್ರ ಹಳಸಿದ ಅನ್ನವನ್ನು ನೀಡಲಾಗಿದೆ ಎನ್ನಲಾಗಿದ್ದು, ಈ ದೃಶ್ಯಗಳು ಎಲ್ಲೆಡೆ ಹರಿದಾಡುತ್ತಿವೆ. ಆಡಳಿತ ಮಂಡಳಿಯ ಈ ನಿರ್ಲಕ್ಷ್ಯಕ್ಕೆ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ, ಇದನ್ನು ಆಡಳಿತ ಮಂಡಳಿಯವರು ಅಲ್ಲಗಳೆದಿದ್ದಾರೆ. ಭಕ್ತರಿಗೆ ಹಳಸಿದ ಅನ್ನವನ್ನು ಪ್ರಸಾದವಾಗಿ ನೀಡಿಲ್ಲ. ಗುಣಮಟ್ಟದ ಆಹಾರವನ್ನೇ ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...