alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಿಗ್ ಶಾಕ್…!

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ಬೆಳಿಗ್ಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ.

117 ಶಾಸಕರ ಬೆಂಬಲ ಇರುವ ತಮಗೆ ಸರ್ಕಾರ ರಚನೆಗೆ ಆಹ್ವಾನ ನೀಡಬೇಕೆಂದು ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿಕೂಟ ಮಾಡಿದ್ದ ಮನವಿಯನ್ನು ರಾಜ್ಯಪಾಲರು ಪರಿಗಣಿಸಿಲ್ಲ.

ಸುಪ್ರೀಂ ಕೋರ್ಟ್ ಹಿರಿಯ ವಕೀಲರ ಸಲಹೆಯನ್ನು ಪಡೆದು, ಅತಿದೊಡ್ಡ ಪಕ್ಷವಾಗಿರುವ ಬಿ.ಜೆ.ಪಿ.ಗೆ ಸರ್ಕಾರ ರಚನೆಗೆ ಆಹ್ವಾನ ನೀಡಲಾಗಿದೆ. ಬಿ.ಜೆ.ಪಿ. 104 ಸ್ಥಾನಗಳನ್ನು ಹೊಂದಿದ್ದು, ನಾಳೆಯೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಹುಮತವನ್ನು ಕೂಡ ಸಾಬೀತುಪಡಿಸಲು ಸಜ್ಜಾಗಿದ್ದು, ಈಗಾಗಲೇ ಬಿ.ಜೆ.ಪಿ. ನಾಯಕರು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ.

ರಾಜ್ಯಪಾಲರ ಆಹ್ವಾನದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರಿಗೆ ಶಾಕ್ ಆಗಿದೆ. ಬಹುಮತವಿದ್ರೂ, ಸರ್ಕಾರ ರಚನೆ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಹೋರಾಟ ನಡೆಸಲು ಎರಡೂ ಪಕ್ಷಗಳ ನಾಯಕರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...