alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರಬಿಂದುವಾದ ರಾಜಭವನ: ರಾಜ್ಯಪಾಲರ ಬಳಿಯಿದೆ 5 ಆಯ್ಕೆ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಅತಂತ್ರವಾಗಿದೆ. ಇದ್ರಿಂದಾಗಿ ಸಮ್ಮಿಶ್ರ ಸರ್ಕಾರದ ಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ರೆ ಬಿಜೆಪಿ ಏಕಾಂಗಿ ಹೋರಾಟಕ್ಕಿಳಿದಿದೆ. ಈಗಾಗಲೇ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ನಮ್ಮದು ದೊಡ್ಡ ಪಕ್ಷ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದಿದ್ದಾರೆ.

ಇತ್ತ ಕಾಂಗ್ರೆಸ್-ಜೆಡಿಎಸ್ ನಾಯಕರು ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಮನವಿ ಸಲ್ಲಿಸುವ ಯತ್ನ ನಡೆಸುತ್ತಿದ್ದಾರೆ. ರಾಜ್ಯಪಾಲರ ಮುಂದೆ ಈಗ ಐದು ಆಯ್ಕೆಗಳಿವೆ. ರಾಜ್ಯಪಾಲರ ನಿರ್ಧಾರವೇ ಅಂತಿಮವಾಗಲಿದೆ.

ಮೊದಲ ಆಯ್ಕೆ : ಯಾವುದೇ ಪಕ್ಷ ಬಹುಮತ ಸಾಬೀತುಪಡಿಸದೇ ಹೋದಲ್ಲಿ ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಂಡ ಪಕ್ಷಗಳು ಒಂದಾಗಿ ಸರ್ಕಾರ ರಚನೆಗೆ ಅವಕಾಶ ನೀಡಬಹುದು. ಆದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಂಡಿಲ್ಲ.

ಎರಡನೇ ಆಯ್ಕೆ : ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಕ್ಷ ಸರ್ಕಾರ ರಚನೆಗೆ ಅವಕಾಶ ಕೋರಬಹುದು. ಪಕ್ಷದ ಬಳಿ ಎಷ್ಟು ಶಾಸಕರ ಬಲವಿದೆ ಎಂಬುದನ್ನು ರಾಜ್ಯಪಾಲರು ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ.

ಮೂರನೇ ಆಯ್ಕೆ : ಚುನಾವಣೆ ನಂತ್ರ ಮೈತ್ರಿ ಮಾಡಿಕೊಂಡ ಪಕ್ಷಕ್ಕೂ ಸರ್ಕಾರ ರಚನೆ ಮಾಡುವ ಅವಕಾಶವಿದೆ. ಎರಡು ಅಥವಾ ಅದಕ್ಕಿಂತ ಹೆಚ್ಚು ಪಕ್ಷಗಳು ಒಂದಾಗಿ ಬಹುಮತ ಸಾಬೀತುಪಡಿಸಿದ್ರೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡ್ತಾರೆ. ಕರ್ನಾಟಕದಲ್ಲಿ ಈಗ ಇದೇ ಆಗ್ತಿದೆ.

ನಾಲ್ಕನೇ ಆಯ್ಕೆ : ಚುನಾವಣೆ ನಂತ್ರ ಒಂದು ಪಕ್ಷ ಇನ್ನೊಂದು ಪಕ್ಷಕ್ಕೆ ಬಾಹ್ಯ ಬೆಂಬಲ ನೀಡಿದ್ರೆ ಕೂಡ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡ್ತಾರೆ.

ಐದನೇ ಆಯ್ಕೆ : ಯಾವುದೇ ಪಕ್ಷ ಬಹುಮತ ಸಾಬೀತುಪಡಿಸಲು ವಿಫಲವಾದ್ರೆ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಘೋಷಣೆ ಮಾಡುತ್ತಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...