alex Certify
ಕನ್ನಡ ದುನಿಯಾ       Mobile App
       

Kannada Duniya

ದಸರಾ ಹಬ್ಬಕ್ಕೂ ಮುನ್ನವೇ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ

ದಸರಾ ಹಬ್ಬ ಆರಂಭಕ್ಕೂ ಮುನ್ನವೇ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ, ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಶೇಕಡಾ ಎರಡರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದ್ದು, ಈ ಆದೇಶ 2018 ರ ಜುಲೈ 1 ರಿಂದ ಪೂರ್ವಾನ್ವಯವಾಗಲಿದೆ. ರಾಜ್ಯ ಸರ್ಕಾರಿ ನೌಕರರ ಮೂಲ ವೇತನದ ಶೇ.1.75 ರಿಂದ 3.75 ಕ್ಕೆ ತುಟ್ಟಿ ಭತ್ಯೆ ಏರಿಕೆ ಮಾಡಿ ಹಣಕಾಸು ಇಲಾಖೆ ಆದೇಶಿಸಿದೆ.

ಸರ್ಕಾರ ತುಟ್ಟಿ ಭತ್ಯೆ ಏರಿಕೆ ಮಾಡಿ ಹೊರಡಿಸಿರುವ ಆದೇಶದಿಂದಾಗಿ ರಾಜ್ಯದ 8.5 ಲಕ್ಷ ಸರ್ಕಾರಿ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ. ಈಗಾಗಲೇ ಕೇಂದ್ರ ಸರ್ಕಾರ ತನ್ನ ನೌಕರರ ವೇತನ ಪರಿಷ್ಕರಣೆ ಬಳಿಕ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ಈಗ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯೂ ಹೆಚ್ಚಳವಾದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...