alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಹೊಸ ಕ್ರಮ

kagodu timmappa 223

ಸರ್ಕಾರಿ ಭೂಮಿಯನ್ನು ಇದುವರೆಗೂ ಉಳ್ಳವರು ತಮ್ಮ ಪ್ರಭಾವ ಬಳಸಿ ಹಾಗೂ ಹಲವರು ಅರಿಯದೆ ಒತ್ತುವರಿ ಮಾಡಿಕೊಂಡಿದ್ದರು. ಇಂತವರು ಈಗಾಗಲೇ ಬೆಂಗಳೂರಿನ ರಾಜಕಾಲುವೆ ಒತ್ತುವರಿ ವಿಚಾರದಲ್ಲಿ ಪರಿತಪಿಸುತ್ತಿದ್ದಾರೆ. ಇಂತಹ ಅಕ್ರಮ ಒತ್ತುವರಿ ತಡೆಗೆ ಈಗ ಸರ್ಕಾರ ಮುಂದಾಗಿದೆ.

ಭೂಮಿ ಒತ್ತುವರಿ ಹಾಗೂ ಅಕ್ರಮ ನೋಂದಣಿ ತಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗ್ರಾಮ ಲೆಕ್ಕಿಗರಿಂದ ವಾರ್ಷಿಕ ಜಮಾಬಂದಿಯನ್ನು ಕಡ್ಡಾಯಗೊಳಿಸಿ, ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಸ್ಥಾನದಲ್ಲೇ ಉಳಿಯಲು ವಸತಿ ಸೌಕರ್ಯ ಕಲ್ಪಿಸುವ ಕ್ರಮಕ್ಕೆ ಮುಂದಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾಹಿತಿ ನೀಡಿದ್ದಾರೆ.

ಶೀಘ್ರದಲ್ಲೇ ಇದಕ್ಕೆ ಸಂಬಂಧಿಸಿದ ಆದೇಶ ಹೊರಡಿಸಲಾಗುವುದು. ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ವಾರ್ಷಿಕ ಜಮಾಬಂದಿ ಸಲ್ಲಿಸಲೇಬೇಕು ಇದರಿಂದ ಸರ್ಕಾರಿ ಭೂಮಿಯ ಒತ್ತುವರಿಯನ್ನು ಸುಲಭವಾಗಿ ಕಂಡು ಹಿಡಿಯಬಹುದು. ಬೆಂಗಳೂರು ನಗರದಲ್ಲಿಯೂ ಇದಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...