alex Certify
ಕನ್ನಡ ದುನಿಯಾ       Mobile App
       

Kannada Duniya

ಬಹುಮತ ಸಾಬೀತಿಗೆ ಹೆಚ್.ಡಿ.ಕೆ. ಗೂ 15 ದಿನಗಳ ಕಾಲಾವಕಾಶ

ಮೂರು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಬಹುಮತವಿಲ್ಲದ ಕಾರಣ ಅಧಿಕಾರ ಕಳೆದುಕೊಂಡಿದ್ದು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ.

ಸೋಮವಾರದಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ದೇಶದ ಘಟಾನುಘಟಿ ರಾಜಕಾರಣಿಗಳನ್ನು ಆಹ್ವಾನಿಸಲಾಗುತ್ತಿದೆ.

ಈ ಮಧ್ಯೆ ಹೆಚ್.ಡಿ. ಕುಮಾರಸ್ವಾಮಿಯವರನ್ನು ಸರ್ಕಾರ ರಚನೆಗೆ ಆಹ್ವಾನ ನೀಡಿರುವ ರಾಜ್ಯಪಾಲ ವಜೂಭಾಯ್ ವಾಲಾ, ಬಹುಮತ ಸಾಬೀತುಪಡಿಸಲು ಕುಮಾರಸ್ವಾಮಿಯವರಿಗೆ 15 ದಿನಗಳ ಕಾಲಾವಕಾಶ ನೀಡಿದ್ದಾರೆನ್ನಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ವೇಳೆ ಬಹುಮತ ಸಾಬೀತಿಗೆ ಯಡಿಯೂರಪ್ಪನವರು 15 ದಿನಗಳ ಕಾಲಾವಕಾಶ ಕೇಳದಿದ್ದರೂ ಅಷ್ಟು ದಿನಗಳ ಕಾಲಾವಕಾಶ ನೀಡಿ ಟೀಕೆಗೆ ಗುರಿಯಾಗಿದ್ದ ರಾಜ್ಯಪಾಲರು ಈಗ ಕುಮಾರಸ್ವಾಮಿಯವರಿಗೂ ಅಷ್ಟೇ ದಿನಗಳ ಅವಕಾಶ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...