alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರಿಗೆ ಕೈ-ಜೆಡಿಎಸ್ ನಿಂದ ಹಕ್ಕು ಮಂಡನೆ

ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಕಾಂಗ್ರೆಸ್-ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ. 118 ಶಾಸಕರ ಬೆಂಬಲವಿರುವ ಪತ್ರವನ್ನು ನಿಯೋಗ ರಾಜ್ಯಪಾಲರಿಗೆ ಸಲ್ಲಿಸಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಹಕ್ಕು ಮಂಡನೆ ಮಾಡಿದ್ದು, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೋರಿದ್ದಾರೆ.

ರಾಜ್ಯಪಾಲರ ಭೇಟಿ ನಂತ್ರ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಈ ಬಗ್ಗೆ ಮಾಹಿತಿ ನೀಡಿದ್ರು. ಕಾಂಗ್ರೆಸ್-ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇವೆ. ರಾಜ್ಯಪಾಲರು ಕಾನೂನು ಪ್ರಕಾರ ನಿರ್ಣಯ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆಂದು ಕುಮಾರಸ್ವಾಮಿ ಹೇಳಿದ್ದಾರೆ.

ಗೋವಾ ಸರ್ಕಾರ ರಚನೆ ವೇಳೆ ಸುಪ್ರೀಂ ತೆಗೆದುಕೊಂಡ ತೀರ್ಮಾನವನ್ನು ರಾಜ್ಯಪಾಲರಿಗೆ ತಿಳಿಸಲಾಗಿದೆ. ಸದ್ಯ ಎರಡೂ ಪಕ್ಷದ ವರದಿಯನ್ನು ರಾಜ್ಯಪಾಲರು ಸ್ವೀಕರಿಸಿದ್ದಾರೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆಂದು ಕುಮಾರಸ್ವಾಮಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...