alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ಧರಾಮಯ್ಯ ನಾಯಕತ್ವದಲ್ಲೇ ಚುನಾವಣೆ’

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಾಯಕತ್ವಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಿ.ಎಂ. ನೇತೃತ್ವದಲ್ಲೇ ನಡೆಸಲು ಹೈಕಮಾಂಡ್ ನಿರ್ದೇಶನ ನೀಡಿದೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಗೆ ರೂಪುರೇಷೆ ಸಿದ್ಧಪಡಿಸಲು, ರಣನೀತಿ ರೂಪಿಸಲು ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ. ನವೆಂಬರ್ ನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದಿಂದ 2 ಪ್ರತ್ಯೇಕ ಯಾತ್ರೆಗಳನ್ನು ನಡೆಸಲಾಗುವುದು. ಯಾತ್ರೆಯ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಸಾಧನೆಯ ಮಾಹಿತಿ ಒಳಗೊಂಡ 1.20 ಕೋಟಿ ಪುಸ್ತಕಗಳನ್ನು ರಾಜ್ಯಾದ್ಯಂತ ವಿತರಿಸಲಾಗುವುದು ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...