alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ.

ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಕೆ ಮಾಡಲಾಗಿತ್ತು. ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಕುರಿತು ಚಿಂತಿಸಿದ್ದಾರೆ ಎನ್ನಲಾಗಿದೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗವನ್ನು ರಚನೆ ಮಾಡಲಾಗಿದ್ದು, ವೇತನ ಆಯೋಗದ ಮುಂದೆ ಹಾಗೂ ಮುಖ್ಯ ಕಾರ್ಯದರ್ಶಿಗಳ ಎದುರು ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿಪ್ರಾಯವನ್ನು ಮಂಡಿಸಲಾಗಿದೆ.

ಅಂತಿಮವಾಗಿ ವೇತನ ಆಯೋಗದ ವರದಿಯಲ್ಲಿ ಶಿಫಾರಸ್ಸನ್ನು ರಾಜ್ಯ ಸರ್ಕಾರಕ್ಕೆ ಮಾಡಲಿದ್ದು, ನಂತರದಲ್ಲಿ ಸರ್ಕಾರ ಶಿಫಾರಸ್ಸಿನ ಕುರಿತಾಗಿ ತೀರ್ಮಾನ ಕೈಗೊಳ್ಳಲಿದೆ.

ವೇತನವನ್ನು ಶೇ. 25 ರಷ್ಟು ಹೆಚ್ಚಿಸುವ ನಿರೀಕ್ಷೆ  ಇದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದು, ಸರ್ಕಾರಿ ನೌಕರರ ವೇತನ ಮತ್ತು ನಿವೃತ್ತಿ ವಯೋಮಿತಿ ಏರಿಕೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...