alex Certify
ಕನ್ನಡ ದುನಿಯಾ       Mobile App
       

Kannada Duniya

ವೇತನ ಪರಿಷ್ಕರಣೆ: ಸರ್ಕಾರಿ ನೌಕರರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿವರವಾಗಿ ನಿಯಮ, ಫಿಟ್ ಮೆಂಟ್ ಕುರಿತಾದ ಕೋಷ್ಠಕ ರೂಪಿಸಲಾಗುತ್ತಿದ್ದು, ಈ ಕುರಿತ ಆದೇಶ ಹೊರಡಿಸಲು ಚುನಾವಣಾ ಆಯೋಗದ ನಿರಾಪೇಕ್ಷಣಾ ಪತ್ರ ಬೇಕಾಗಿದೆ.

6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ಈಗಾಗಲೇ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಗಳನ್ನು 2017 ರ ಜುಲೈ 1 ರಿಂದಲೇ ಪರಿಷ್ಕರಿಸಲಾಗಿದೆ. ಮಾರ್ಚ್ 1 ರಂದು ಸರ್ಕಾರಿ ಆದೇಶ ಹೊರಡಿಸಿ, ಮಾರ್ಚ್ 2 ರಂದು ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಆದೇಶದಲ್ಲಿ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಆರ್ಥಿಕ ಸೌಲಭ್ಯವನ್ನು ನೀಡಲು ತಿಳಿಸಲಾಗಿದೆ. ಪರಿಷ್ಕೃತ ವೇತನ ಜಾರಿಗೆ ಸಂಬಂಧಿಸಿದಂತೆ ನಿರಾಪೇಕ್ಷಣಾ ಪತ್ರವನ್ನು ಪಡೆಯಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆಯಲಾಗಿದೆ. ಚುನಾವಣಾ ಆಯೋಗ ಅನುಮತಿ ನೀಡಿದ ಕೂಡಲೇ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಆದೇಶಗಳನ್ನು ಹೊರಡಿಸಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...