alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಇಂದು ಸಿಗಲಿದೆ ಸಿಹಿ ಸುದ್ದಿ…!

ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ. 6 ನೇ ವೇತನ ಆಯೋಗ ಮಾಡಿರುವ ಶಿಫಾರಸ್ಸಿನಂತೆ ಶೇ. 30 ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. 6 ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆಗಾಗಿ ಇರಿಸಲಾಗಿದ್ದು, ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ.

ವೇತನ ಆಯೋಗದ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿ.ಎಂ., ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಚುನಾವಣೆ ಸಮೀಪದಲ್ಲಿರುವುದರಿಂದ ಇಂದಿನ ಸಂಪುಟ ಸಭೆಯಲ್ಲಿಯೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...