alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ಗೂ ಮೊದಲೇ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಸರ್ಕಾರಿ ನೌಕರರ ವಿರೋಧಿ ಎನ್ನುವ ಆರೋಪದಿಂದ ದೂರವಾಗಲು ಸಿದ್ಧರಾಮಯ್ಯ ಈ ಬಾರಿ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡಲು ಮುಂದಾಗಿದ್ದಾರೆ. ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ರಚಿಸಲಾಗಿರುವ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರಲಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನೀಡಿರುವ ಹಲವು ಸಲಹೆಗಳನ್ನು ಪರಿಗಣಿಸಲಿದ್ದಾರೆ. ಅದರಂತೆ ಕೆಲಸದ ದಿನಗಳು, ವಾರದ ರಜೆ ಬದಲಾಗಲಿವೆ. ವೇತನ ಹೆಚ್ಚಳದ ಜೊತೆಗೆ ನಿವೃತ್ತಿ ವಯಸ್ಸು ಏರಿಕೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಚುನಾವಣೆಯ ಹೊಸ್ತಿಲಲ್ಲಿ ಸರ್ಕಾರಿ ನೌಕರರ ಮನವನ್ನು ಗೆಲ್ಲಲು ಸಿ.ಎಂ. ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಬೇರೆ ರಾಜ್ಯಗಳಲ್ಲಿ ಇರುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನವನ್ನು ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...