alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಮುಖ್ಯಮಂತ್ರಿ, ಪರಮೇಶ್ವರ್ ಡಿ.ಸಿ.ಎಂ.

ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ರೂಪುರೇಷೆ ಸಿದ್ಧಪಡಿಸಲಾಗ್ತಿದೆ. 78 ಸ್ಥಾನ ಗಳಿಸಿದ ಕಾಂಗ್ರೆಸ್ ಹಾಗೂ 38 ಸ್ಥಾನ ಗಳಿಸಿದ ಜೆ.ಡಿ.ಎಸ್. ಪಕ್ಷದ ನಾಯಕರು ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ಇಂದು ಎರಡೂ ಪಕ್ಷಗಳ ಶಾಸಕಾಂಗ ಸಭೆ ನಡೆಯಲಿದ್ದು, ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಿ, ಶಾಸಕರ ಸಹಿ ಪಡೆದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. 5 ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ನಡೆಸಲಿದ್ದಾರೆ.

ಕಾಂಗ್ರೆಸ್ ನಲ್ಲಿ ದಲಿತ ನಾಯಕರಿಗೆ ಡಿ.ಸಿ.ಎಂ. ಹುದ್ದೆ ನೀಡಬೇಕೆಂಬ ಚರ್ಚೆ ಹಿನ್ನಲೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು. ಇದರೊಂದಿಗೆ ತಲಾ 17 ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿಕೊಳ್ಳಲಾಗುವುದು.

ಉಭಯ ಪಕ್ಷಗಳ ನಾಯಕರು ಮೈತ್ರಿ ಸರ್ಕಾರದ ರೂಪುರೇಷೆ ಕುರಿತಾಗಿ ಸುದೀರ್ಘ ಚರ್ಚೆ ನಡೆಸಿದ್ದು, ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಲು ಮತ್ತು ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ, ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...