alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಮಾರ್ಚ್ 2 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ.

ಎಲ್ಲಾ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯದ 10 ಪ್ರತಿಷ್ಠಿತ ಆಸ್ಪತ್ರೆಗಳನ್ನು ಮೊದಲ ಹಂತದಲ್ಲಿ ಸೇರ್ಪಡೆ ಮಾಡಲಾಗಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ, ಕೋಲಾರದ ಎಸ್.ಎನ್.ಆರ್. ಆಸ್ಪತ್ರೆ, ಕಲಬುರಗಿಯ ಜೆಮ್ಸ್ ವೈದ್ಯಕೀಯ ಆಸ್ಪತ್ರೆ, ಬಳ್ಳಾರಿಯ ವಿಮ್ಸ್, ಮಂಗಳೂರಿನ ವೆನ್ ಲಾಕ್ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್, ಬೆಂಗಳೂರಿನ ಬೆಂಗಳೂರು ಮೆಡಿಕಲ್ ಕಾಲೇಜು, ಕೆ.ಸಿ. ಜನರಲ್ ಆಸ್ಪತ್ರೆ, ಜಯದೇವ ಹೃದ್ರೋಗ ಸಂಸ್ಥೆ ಆರೋಗ್ಯ ಕರ್ನಾಟಕ ಯೋಜನೆಯಡಿ ಸೇವೆಯನ್ನು ನೀಡಲಿವೆ.

ಈ ಆಸ್ಪತ್ರೆಗಳಲ್ಲಿ ಉಚಿತವಾಗಿ ಮೊದಲ ಹಂತದ, ದ್ವಿತೀಯ ಹಂತ ಹಾಗೂ ತೃತೀಯ ಹಂತದ ಚಿಕಿತ್ಸೆಗಳು ದೊರೆಯಲಿವೆ. ಈ ಆಸ್ಪತ್ರೆಗಳಲ್ಲಿ ಲಭ್ಯವಾಗದ ಚಿಕಿತ್ಸೆಯನ್ನು ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲು ಅವಕಾಶವಿದೆ. ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ. ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 1.5 ಲಕ್ಷ ರೂ. ಮಿತಿಯಂತೆ ರಾಜ್ಯದ 1.40 ಕೋಟಿ ಕುಟುಂಬಗಳಿಗೆ ಸರ್ಕಾರ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ. ಎ.ಪಿ.ಎಲ್. ವರ್ಗದವರ ಶೇ. 30 ರಷ್ಟು ಶುಲ್ಕವನ್ನು ಸರ್ಕಾರದಿಂದ ಭರಿಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...