alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಸಾವಿರಾರು ಹುದ್ದೆಗಳನ್ನು ರದ್ದುಪಡಿಸುವ ಸಾಧ್ಯತೆ ಇದೆ.

ಮಂಜೂರಾದ ಹುದ್ದೆಗಳಲ್ಲಿ 2,52,596 ಹುದ್ದೆಗಳು ಖಾಲಿ ಉಳಿದಿವೆ. ಇವುಗಳಲ್ಲಿ ಸಾವಿರಾರು ಹುದ್ದೆಗಳನ್ನು ಆರ್ಥಿಕ ಮಿತಿಯ ಕಾರಣದಿಂದ ರದ್ದುಪಡಿಸಲು ಸರ್ಕಾರ ಚಿಂತನೆ ನಡೆಸಿದೆ.

ಮಂಜೂರಾಗಿರುವ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಮಾಡಿದಲ್ಲಿ ವಾರ್ಷಿಕವಾಗಿ ಕನಿಷ್ಠ 10,000 ಕೋಟಿ ರೂ. ಆರ್ಥಿಕ ಹೊರೆ ಬೀಳಲಿದೆ. ಜನಸಂಖ್ಯೆ ಆಧಾರದಲ್ಲಿ ಆಡಳಿತದ ಕಾರ್ಯದಕ್ಷತೆಯ ಉದ್ದೇಶದಿಂದ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಬಜೆಟ್ ಗಾತ್ರದೊಳಗೆ ಶೇ. 35 ರಷ್ಟು ಮೊತ್ತವನ್ನು ವೇತನ, ಭತ್ಯೆಗೆ ನೀಡಬಹುದಾಗಿದೆ.

ರಾಜ್ಯದಲ್ಲಿ ಈ ಪ್ರಮಾಣ ಶೇ. 32 ರಷ್ಟು ತಲುಪಿದೆ. ಸರ್ಕಾರಿ ನೌಕರರ ವೇತನಕ್ಕೆ 25,406 ಕೋಟಿ ರೂ. ಪಿಂಚಣಿಗೆ 13,183 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದರೊಂದಿಗೆ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ 6347 ಕೋಟಿ ರೂ. ಭರಿಸಲಾಗುತ್ತಿದೆ.

ಖಾಲಿ ಉಳಿದ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಮಾಡಿದಲ್ಲಿ ವಾರ್ಷಿಕ 10,000 ಕೋಟಿ ರೂ. ಹೊರೆಯಾಗಲಿರುವ ಹಿನ್ನಲೆಯಲ್ಲಿ ಕಾರ್ಯ ವಿಧಾನ ಬದಲಾವಣೆ, ತಂತ್ರಜ್ಞಾನ ಅಳವಡಿಕೆ ಮೂಲಕ ಆಡಳಿತದ ಕಾರ್ಯದಕ್ಷತೆ ಹೆಚ್ಚಿಸಲು ಚಿಂತಿಸಲಾಗಿದೆ. ಆರ್ಥಿಕ ಮಿತಿಯ ಕಾರಣದಿಂದ ಖಾಲಿ ಉಳಿದಿರುವ ಹುದ್ದೆಗಳಲ್ಲಿ ಸಾವಿರಾರು ಹುದ್ದೆಗಳನ್ನು ರದ್ದುಪಡಿಸಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...