alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಡಬಲ್ ಧಮಾಕ…! ಏನದು ಗೊತ್ತಾ…?

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಗಲಿದೆ. ನೌಕರರ ವೇತನ ಹೆಚ್ಚಳದ ಜೊತೆಗೆ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡಲು ಸರ್ಕಾರ ಯೋಜಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನವನ್ನು ಶೇ. 24 ರಿಂದ 30 ರಷ್ಟು ಹೆಚ್ಚಳ ಮಾಡಲು ಮುಂದಾಗಿದ್ದು, ಇದರೊಂದಿಗೆ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡುವ ಕುರಿತು ಘೋಷಣೆ ಮಾಡಲಿದ್ದಾರೆ.

ಡಿ.ವಿ. ಸದಾನಂದಗೌಡ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ಸರ್ಕಾರಿ ನೌಕರರ ವೇತನ ಹೆಚ್ಚಳದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

ಚುನಾವಣೆ ಸಮೀಪದಲ್ಲಿರುವುದರಿಂದ ಸರ್ಕಾರಿ ನೌಕರರ ಓಲೈಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ವೇತನ ಆಯೋಗ ನೀಡಿರುವ ವರದಿಯನ್ನು ಆಧರಿಸಿ ಬಜೆಟ್ ನಲ್ಲಿ ಘೋಷಣೆ ಮಾಡಲಿದ್ದಾರೆ. ಶೇ. 24 ರಿಂದ 30 ರಷ್ಟು ವೇತನ ಹೆಚ್ಚಳ, 4 ನೇ ಶನಿವಾರ ರಜೆ ನೀಡಲಿದ್ದಾರೆ ಎನ್ನಲಾಗಿದೆ.

ಆದರೆ, ರಾಜ್ಯ ಸರ್ಕಾರಿ ನೌಕರರಿಂದ ಅಸಮಾಧಾನ ವ್ಯಕ್ತವಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದಾಗ ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯ ಹೆಚ್ಚಿದೆ. ತಾರತಮ್ಯ ಸರಿಪಡಿಸಿ ವೇತನ ಹೆಚ್ಚಳವನ್ನು ಮಾಡಬೇಕೆಂಬುದು ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಸರ್ಕಾರಕ್ಕೆ, ವೇತನ ಆಯೋಗಕ್ಕೆ ನೌಕರರು ಈ ಕುರಿತು ಹಿಂದೆಯೇ ಮನವಿ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...