alex Certify
ಕನ್ನಡ ದುನಿಯಾ       Mobile App
       

Kannada Duniya

ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ಅಂತಿಮ ತಯಾರಿ

ಬೆಂಗಳೂರು: ಮುಂದಿನ ಅಧಿವೇಶನದಲ್ಲಿಯೇ ಮೌಢ್ಯ ನಿಷೇಧ ವಿಧೇಯಕ ಮಂಡಿಸಲು ಸರ್ಕಾರ ಮುಂದಾಗಿದೆ. ಕಾನೂನು ಸಚಿವರ ಅಧ್ಯಕ್ಷತೆಯ ಪರಿಶೀಲನಾ ಸಮಿತಿ ವಿಧೇಯಕದ ಕರಡನ್ನು ಅಂತಿಮಗೊಳಿಸಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು.

ಭಾರೀ ಚರ್ಚೆಗೆ ಒಳಗಾಗಿರುವ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಸರ್ಕಾರ ಈಗಾಗಲೇ ಅಂತಿಮ ಹಂತದ ತಯಾರಿ ನಡೆಸಿದ್ದು, ಕರಡು ಮಹಾರಾಷ್ಟ್ರ ಮಾದರಿಯನ್ನು ಬಹುತೇಕ ಒಳಗೊಂಡಿದೆ. ಜ್ಯೋತಿಷ್ಯ ಶಾಸ್ತ್ರ, ವಾಸ್ತು ವಿಚಾರಗಳನ್ನು ಇದರಿಂದ ಹೊರಗಿಡಲಾಗಿದೆ. ನಂಬಿಕೆ ಮತ್ತು ಮೂಢನಂಬಿಕೆಗಳನ್ನು ಸ್ಪಷ್ಟವಾಗಿ ಗುರುತಿಸಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಟಿ.ಬಿ. ಜಯಚಂದ್ರ ಈ ಕುರಿತು ಮಾಹಿತಿ ನೀಡಿದ್ದು, ಸಂಪುಟ ಉಪಸಮಿತಿ, ಪರಿಶೀಲನಾ ಸಮಿತಿ ಮೊದಲಾದ ಹಂತಗಳಲ್ಲಿ ಪರಾಮರ್ಶೆ ನಡೆಸಲಾಗಿದೆ. ಹಲವಾರು ಗಣ್ಯರ ಸಲಹೆ, ಅಭಿಪ್ರಾಯ ಪಡೆದು, ಕಾಯ್ದೆಯ ಕರಡು ಪ್ರತಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...