alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರದಿಂದ ಉಚಿತ ವೈಫೈ ಭಾಗ್ಯ

wifi-govt

ಬೆಂಗಳೂರು: ಗ್ರಾಮಾಂತರ ಪ್ರದೇಶಗಳಲ್ಲಿ ಉಚಿತವಾಗಿ ವೈ ಫೈ ಸೇವೆಯನ್ನು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬಿ.ಎಸ್.ಎನ್.ಎಲ್. ನೊಂದಿಗೆ ರಾಜ್ಯ ಸರ್ಕಾರ 3 ವರ್ಷದ ಅವಧಿಗೆ ಒಪ್ಪಂದ ಮಾಡಿಕೊಳ್ಳಲಿದೆ. ರಾಜ್ಯದ 2500 ಗ್ರಾಮ ಪಂಚಾಯಿತಿಗಳಲ್ಲಿ ವೈ ಫೈ ಸೌಲಭ್ಯವನ್ನು ಕಲ್ಪಿಸಲಾಗುವುದು.

2017 ರಿಂದ 2020 ರ ವರೆಗೆ ವೈ ಫೈ ಸೌಭ್ಯವನ್ನು ಕಲ್ಪಿಸಲು ಬಿ.ಎಸ್.ಎನ್.ಎಲ್. ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಸುಮಾರು 79.50 ಕೋಟಿ ರೂ. ವೆಚ್ಚ ಮಾಡಲಾಗುವುದು ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಸಚಿವ ಟಿ.ಬಿ. ಜಯಚಂದ್ರ ಈ ಕುರಿತು ಮಾಹಿತಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉಚಿತವಾಗಿ ವೈ ಫೈ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...