alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದ ಎಸ್ಐಟಿ

ಬೆಂಗಳೂರಿನಲ್ಲಿ ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿದೆ.

ಸುಳ್ಯದ ಮೋಹನ್ ನಾಯಕ್ ಬಂಧಿತ ಆರೋಪಿಯಾಗಿದ್ದು, ಈತ ಗೌರಿ ಲಂಕೇಶ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ ಹಾಗೂ ಪರಶುರಾಮ್ ವಾಗ್ಮೋರೆಗೆ ಸುಂಕದಕಟ್ಟೆಯಲ್ಲಿ ಬಾಡಿಗೆ ಮನೆ ಕೊಡಿಸಲು ನೆರವಾಗಿದ್ದನೆಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಹಲವು ಸ್ನೇಹಿತರನ್ನು ಹೊಂದಿದ್ದ ಮೋಹನ್ ನಾಯಕ್, ಆರೋಪಿಗಳಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಿದ್ದನೆಂದು ಹೇಳಲಾಗಿದ್ದು, ಸುಳ್ಯದಿಂದ ಆತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...