alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಹತ್ಯೆ ಕೇಸ್ ನಲ್ಲಿ ಸಿಕ್ಕಿದೆ ಸ್ಪೋಟಕ ಮಾಹಿತಿ: ಏನಿದೆ ಚಾರ್ಜ್ ಶೀಟ್ ನಲ್ಲಿ?

ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲೇ ಹಂತಕರಿಂದ ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ.

ಗೌರಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹೊಟ್ಟೆ ನವೀನ್ ನನ್ನು ಈ ಮೊದಲೇ ಬಂಧಿಸಿದ್ದ ಪೊಲೀಸರು, ಇದೀಗ ಆತ ಕೊಟ್ಟ ಸುಳಿವಿನ ಮೇರೆಗೆ ಮತ್ತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪ್ರೊ. ಕೆ.ಎಸ್. ಭಗವಾನ್ ಅವರ ಹತ್ಯೆಗೂ ಈ ತಂಡ ಸಂಚು ನಡೆಸಿತ್ತು ಎಂಬ ಮಾಹಿತಿ ತನಿಖೆ ವೇಳೆ ಹೊರಬಿದ್ದಿದೆ.

ಮಹಾರಾಷ್ಟ್ರದ ಪುಣೆಯ ಚಿಂಚವಾಡ ನಗರದ ಅಮೋಲ್ ಕಾಳೆ, ಸಿಂಧುದುರ್ಗ ಜಿಲ್ಲೆಯ ಅಮಿತ್, ಕರ್ನಾಟಕದ ವಿಜಯಪುರ ಜಿಲ್ಲೆಯ ರತ್ನಾಪುರ ಗ್ರಾಮದ ಮನೋಹರ್ ಹಾಗೂ ಶಿಕಾರಿಪುರ ತಾಲ್ಲೂಕಿನ ಕಪ್ಪನಹಳ್ಳಿಯ ಸುಜಿತ್ ಬಂಧಿತ ಆರೋಪಿಗಳಾಗಿದ್ದು, ಇವರ ಬಳಿ ಹಲವಾರು ಮೊಬೈಲ್ ಹ್ಯಾಂಡ್ ಸೆಟ್ ಗಳು, ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು ಸಿಕ್ಕಿವೆ ಎನ್ನಲಾಗಿದೆ.

ಆರೋಪಿಗಳಾದ ಹೊಟ್ಟೆ ನವೀನ್, ಸುಜಿತ್ ಮತ್ತು ಕಾಳೆ ಚಾಮರಾಜನಗರದ ಗುಂಡಾಲ್ ಡ್ಯಾಂ ಬಳಿ ಭೇಟಿಯಾಗಿದ್ದರು ಎನ್ನಲಾಗಿದ್ದು, ಅಲ್ಲಿಯೇ ಹೊಟ್ಟೆ ನವೀನ್, ಅವರಿಗೆ ಶಸ್ತ್ರಾಸ್ತ್ರ ಪೂರೈಸಿದ್ದ ಎನ್ನಲಾಗಿದೆ. ಒಟ್ಟು 650 ಪುಟಗಳ ಚಾರ್ಜ್ ಶೀಟ್ ಅನ್ನು ವಿಶೇಷ ತಂಡ ಸಿದ್ಧಪಡಿಸಿದ್ದು, ಇಂದು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...