alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಹತ್ಯೆ ಆರೋಪಿಗಳು ಬಿಚ್ಚಿಟ್ಟಿದ್ದಾರೆ ಸ್ಪೋಟಕ ಸತ್ಯ?

2017 ರ ಸೆಪ್ಟಂಬರ್ 5 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದ ಮುಂದೆಯೇ ಹಂತಕರ ಗುಂಡಿಗೆ ಬಲಿಯಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕೊನೆಗೂ ಒಂದು ಹಂತಕ್ಕೆ ಬಂದು ತಲುಪಿದೆ. ಮಂಗಳವಾರದಂದು ವಿಜಯಪುರ ಜಿಲ್ಲೆ ಸಿಂದಗಿಯ ಪರಶುರಾಮ್ ವಾಗ್ಮೋರೆ ಎಂಬಾತನನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ಈತನೇ ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿದ ಆರೋಪಿ ಎಂಬ ಅನುಮಾನ ಹೊಂದಿದೆ.

ಈ ಮೊದಲೇ ಹಲವು ಆರೋಪಿಗಳು ಪ್ರಕರಣದಲ್ಲಿ ಬಂಧಿತರಾಗಿದ್ದು, ಆರೋಪಿಗಳ ವಿಚಾರಣೆ ವೇಳೆ ಮತ್ತೊಂದು ಸ್ಪೋಟಕ ಸಂಗತಿ ಬಯಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ವಿಚಾರವಾದಿ ಕೆ.ಎಸ್. ಭಗವಾನ್ ರನ್ನು ಹತ್ಯೆ ಮಾಡಲು ಈ ತಂಡ ಸಂಚು ರೂಪಿಸಿತ್ತೆಂಬ ಮಾಹಿತಿ ತನಿಖೆ ವೇಳೆ ಹೊರ ಬಿದ್ದಿದೆ ಎನ್ನಲಾಗಿದೆ.

ಆದರೆ ತಂಡದ ನವೀನ್ ಎಂಬಾತನನ್ನು ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ದಳ ಬಂಧನಕ್ಕೊಳಪಡಿಸಿದ ಬಳಿಕ ತಮ್ಮ ಪ್ಲಾನ್ ಕೈಬಿಟ್ಟರೆಂದು ಹೇಳಲಾಗಿದೆ. ಈ ಮಧ್ಯೆ ಮಂಗಳವಾರ ಬಂಧನಕ್ಕೊಳಗಾಗಿರುವ ಪರಶುರಾಮ ವಾಗ್ಮೋರೆ ಕ್ಷಣಕ್ಕೊಂದು ಹೇಳಿಕೆ ನೀಡುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆಂದು ಹೇಳಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...