alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ವಶಕ್ಕೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಭಾನುವಾರದಂದು ಮತ್ತಿಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಚಿನ್ನಾಭರಣಗಳ ತಯಾರಿಕಾ ಅಮಿತ್ ಹಾಗೂ ಉದುಬತ್ತಿ ವ್ಯಾಪಾರಿ ಗಣೇಶ್ ಮಸ್ಕಿನ್ ಬಂಧಿತ ಆರೋಪಿಗಳಾಗಿದ್ದು, ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಇವರುಗಳು ಪ್ರಮುಖ ಪಾತ್ರ ವಹಿಸಿದ್ದಾರೆಂಬ ಅನುಮಾನದ ಮೇರೆಗೆ ವಶಕ್ಕೆ ಪಡೆಯಲಾಗಿದೆ.

ಅದರಲ್ಲೂ ಗಣೇಶ್ ಮಸ್ಕಿನ್, ಹತ್ಯೆ ಮಾಡಿರುವ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಹತ್ಯೆ ನಡೆದ ದಿನದಂದು ಗೌರಿ ಲಂಕೇಶ್ ಮನೆ ಬಳಿ ಬೈಕ್ ನಲ್ಲಿ ಕರೆದುಕೊಂಡು ಬಂದಿರುವ ಗುಮಾನಿ ಹೊಂದಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಲು ಮುಂದಾಗಿದ್ದು, ಬಂಧಿತರನ್ನು 14 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಒಪ್ಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...