alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಹತ್ಯೆ ಆರೋಪಿ ಕುಟುಂಬಕ್ಕೆ ನೆರವಾಗುವಂತೆ ಕೋರಿ ಫೇಸ್ಬುಕ್ ಪೋಸ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ವಿಶೇಷ ತನಿಖಾ ದಳದ ವಶದಲ್ಲಿರುವ ವಿಜಯಪುರ ಜಿಲ್ಲೆ ಸಿಂದಗಿಯ ಪರಶುರಾಮ್ ವಾಗ್ಮೋರೆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡುವಂತೆ ಕೋರಿ ಕೆಲವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಈಗ ವೈರಲ್ ಆಗಿದೆ.

ಈ ಪೋಸ್ಟ್ ನಲ್ಲಿ, ಪರಶುರಾಮ್ ವಾಗ್ಮೋರೆ ಕುಟುಂಬ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ನೆರವು ನೀಡಲು ಕೋರಲಾಗಿದೆಯಲ್ಲದೆ ಸಿಂದಗಿಯ ಕರ್ನಾಟಕ ಬ್ಯಾಂಕ್ ನಲ್ಲಿರುವ ಅಶೋಕ್ ವಾಗ್ಮೋರೆಯವರ ಖಾತೆ ಸಂಖ್ಯೆಯನ್ನೂ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀರಾಮಸೇನೆಯ ಮುಖಂಡರೊಬ್ಬರು, ಪರಶುರಾಮ್ ವಾಗ್ಮೋರೆ ಕುಟುಂಬ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಅವರಿಗೆ ನೆರವಾಗಲು ಪೋಸ್ಟ್ ನಲ್ಲಿ ಕೋರಲಾಗಿದೆ ಎಂದು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...