alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಘನತ್ಯಾಜ್ಯ ನಿರ್ವಹಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಪ್ರತಿ ತಾಲೂಕಿನ ಐದರಿಂದ ಆರು ಗ್ರಾಮ ಪಂಚಾಯಿತಿಗಳಲ್ಲಿ ಘಟಕ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ಆರಂಭಿಕ ಹಂತದಲ್ಲಿ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಘನ ತಾಜ್ಯ ನಿರ್ವಹಣೆ ಘಟಕ ಆರಂಭಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು, ಸಮುದಾಯದ ಮುಖ್ಯಸ್ಥರ ನೆರವು ಪಡೆದುಕೊಳ್ಳಲು ಚಿಂತಿಸಲಾಗಿದೆ. ಬಳಿಕ ಹಂತ ಹಂತವಾಗಿ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ.

ನವೆಂಬರ್ ಒಂದರಂದು ಕರ್ನಾಟಕವನ್ನು ‘ಬಯಲು ಬಹಿರ್ದೆಸೆ ಮುಕ್ತ’ ಎಂದು ಘೋಷಣೆ ಮಾಡಲಾಗುತ್ತಿದ್ದು, ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಕಾರಣ, ಬೇಡಿಕೆ ಇರುವ ಜಿಲ್ಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...