alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ರಾಜ್ಯದ ಆರು ಸಾವಿರ ಹಳ್ಳಿಗಳಲ್ಲಿಲ್ಲ ‘ಸ್ಮಶಾನ’

ಹುಟ್ಟಿದ ಮನುಷ್ಯ ಸಾಯಲೇಬೇಕು. ಸತ್ತವರ ಅಂತ್ಯ ಸಂಸ್ಕಾರಕ್ಕೆಂದು ಪ್ರತಿ ಊರುಗಳಲ್ಲೂ ಪ್ರತ್ಯೇಕ ಸ್ಥಳವನ್ನು ನಿಗದಿಪಡಿಸಲಾಗಿರುತ್ತದೆ. ಆದರೆ ರಾಜ್ಯದ ಆರು ಸಾವಿರಕ್ಕೂ ಅಧಿಕ ಹಳ್ಳಿಗಳಲ್ಲಿ ಸ್ಮಶಾನವೇ ಇಲ್ಲ ಎಂಬ ಅಂಶ ಈಗ ಬಹಿರಂಗವಾಗಿದೆ.

ಈ ವಿಚಾರವನ್ನು ಕಂದಾಯ ಇಲಾಖೆಯೇ ಹೈಕೋರ್ಟ್ ಗೆ ತಿಳಿಸಿದ್ದು, ರಾಜ್ಯದ 29,518 ಹಳ್ಳಿಗಳ ಪೈಕಿ 6,053 ಹಳ್ಳಿಗಳಲ್ಲಿ ಸ್ಮಶಾನಗಳಿಲ್ಲವೆಂದು ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ವೇಳೆ ಈ ಮಾಹಿತಿ ನೀಡಲಾಗಿದೆ.

ವಕೀಲ ಮಹಮದ್ ಇಕ್ಬಾಲ್ ಎಂಬವರು ರಾಜ್ಯದಲ್ಲೆಡೆ ಸ್ಮಶಾನ ಭೂಮಿ ಕಾಯ್ದಿರಿಸುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ವೇಳೆ ಹೈಕೋರ್ಟ್ ಗೆ ಈ ಮಾಹಿತಿ ನೀಡಿದ ಸರ್ಕಾರಿ ವಕೀಲರು, 281 ಪಟ್ಟಣಗಳಲ್ಲೂ ಸ್ಮಶಾನಗಳ ಅಗತ್ಯವಿದ್ದು, ಇದಕ್ಕೆ ಸೂಕ್ತ ಜಾಗ ಖರೀದಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...