alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ಡೆಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಆರಂಭ

img-20170814-wa0104ಶಿವಮೊಗ್ಗ: ನಗರದ ಪ್ರಸಿದ್ದ ಗುಡ್ಡೆಕಲ್ ನ ಶ್ರೀ ಬಾಲಸುಬ್ರಮಣ್ಯ ಸ್ವಾಮಿಯ ಜಾತ್ರಾ ಮಹೋತ್ಸವ ಇಂದಿನಿಂದ ಸಡಗರ, ಸಂಭ್ರಮದಿಂದ ಆರಂಭವಾಗಿದೆ.

ಆಡಿಕೃತ್ತಿಕಾ ಜಾತ್ರೆಯ ಅಂಗವಾಗಿ ಸಾವಿರಾರು ಜನರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.

ಕಾವಡಿ ಹೊತ್ತ ನೂರಾರು ಭಕ್ತರು ಕುಟುಂಬ ಸಮೇತರಾಗಿ ನಗರದ ವಿವಿಧ ಭಾಗಗಳಿಂದ ಪಾದಯಾತ್ರೆಯ ಮೂಲಕ ಹರೋಹರ ಎಂದು ಘೋಷಣೆ ಕೂಗುತ್ತಾ ದೇವಸ್ಥಾನ ತಲುಪಿ ಹರಕೆ ಸಲ್ಲಿಸಿದರು.

ಅರಿಶಿನದ ಮಡಿ ವಸ್ತ್ರ ಧರಿಸಿದ ಮಹಿಳೆಯರು, ಹಿರಿಯರು, ಮಕ್ಕಳು ನಾನಾ ರೀತಿಯಿಂದ ಅಲಂಕೃತಗೊಂಡಿದ್ದ ಕಾವಡಿ ಹೊತ್ತು, ಬಾಯಿಗೆ ವೇಲಾಯುಧವನ್ನು ಚುಚ್ಚಿಕೊಂಡು ಮಂಗಳವಾದ್ಯದೊಂದಿಗೆ ನಡೆದ ದೃಶ್ಯವು ಎಲ್ಲರ ಗಮನ ಸೆಳೆದಿತ್ತು.

ಮಳೆಯ ಅಬ್ಬರ ಕಡಿಮೆಯಾಗಿದ್ದರಿಂದ ಜಾತ್ರೆಗೆ ಮತ್ತು ದೇವರ ದರ್ಶನಕ್ಕೆ ಬರುವವರಿಗೆ ಅನುಕೂಲದ ವಾತಾವರಣವಿತ್ತು.

ಸಂಚಾರದ ವ್ಯವಸ್ಥೆಯನ್ನು ಸುಗಮಗೊಳಿಸಲಾಗಿದ್ದು, ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ದೇವಸ್ಥಾನದ ಸುತ್ತ ತಿಂಡಿ ತಿನಿಸುಗಳು, ಆಟಿಕೆಗಳು, ಅಲಂಕಾರಿಕ ವಸ್ತುಗಳ ಅಂಗಡಿಗಳ ಮುಂದೆ ಮಹಿಳೆಯರು ಮತ್ತು ಮಕ್ಕಳು ಸೇರಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಜಿಲ್ಲೆ ಸೇರಿದಂತೆ ರಾಜ್ಯ, ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ಯಾವುದೇ ನೂಕುನುಗ್ಗಲು ಉಂಟಾಗದಂತೆ ದೇವಾಲಯ ಆಡಳಿತ ಮಂಡಳಿಯಿಂದ ಕ್ರಮ ಕೈಗೊಳ್ಳಲಾಗಿತ್ತು. ದೇವರ ದರ್ಶನಕ್ಕೆ ಮತ್ತು ತೀರ್ಥಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು ಭಕ್ತರು ಪುನೀತರಾದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...