alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರಪ್ಪ

ಶಿವಮೊಗ್ಗ : ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವ ಗುರಿಗೆ ಇನ್ನಷ್ಟು ಹುಮ್ಮಸ್ಸು ಬಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳುಗಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದರು. ಅವರು ಹೇಳಿದ್ದು ಸುಳ್ಳಾಗಿದೆ. ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಹೇಳಿದರು.

ಕಾಂಗ್ರೆಸ್ ಜಾತಿ ರಾಜಕಾರಣಕ್ಕೆ ಬೆಂಬಲ ಕೊಡದ ಜನ ರಾಷ್ಟ್ರೀಯವಾದಕ್ಕೆ ಮನ್ನಣೆ ನೀಡಿದ್ದಾರೆ. ನೋಟ್ ಬ್ಯಾನ್, ಜಿಎಸ್ಟಿ ವಿರುದ್ದ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ಜಾತಿ ರಾಜಕಾರಣ ಮಾಡಿ ಪ್ರಚಾರ ನಡೆಸಿತ್ತು. ಆದರೆ ಕಾಂಗ್ರೆಸ್ ನ ಜಾತಿ ರಾಜಕಾರಣಕ್ಕೆ ಜನ ಮಂಗಳಾರತಿ ಮಾಡಿದ್ದಾರೆ ಎಂದು ಕುಟುಕಿದರು.

ಬಿಜೆಪಿಯ ರಾಷ್ಟ್ರೀಯ ವಾದಕ್ಕೆ ದೇಶದ ಜನ ಬೆಂಬಲ ನೀಡುತ್ತಿದ್ದಾರೆ. ಇದು ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಫಲಿತಾಂಶದಲ್ಲಿ ಸಾಬೀತು ಆಗಿದೆ. ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲಿದೆ. ಪಟೇಲ್ ಪಾಟಿದಾರ್ ಹಿಂದುಳಿದ ಹಾಗೂ ದಲಿತ ವರ್ಗಗಳನ್ನು ಎತ್ತಿ ಕಟ್ಟಿ ಕಾಂಗ್ರೆಸ್ ರಾಜಕಾರಣ ಮಾಡಲು ಮುಂದಾಗಿತ್ತಾದರೂ ಅಲ್ಲಿನ ಜನ ಬೆಂಬಲ ನೀಡಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದಿದ್ದಾರೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...