alex Certify
ಕನ್ನಡ ದುನಿಯಾ       Mobile App
       

Kannada Duniya

ದೇವೇಗೌಡರ ನಿವಾಸದಲ್ಲಿ ಶುರುವಾಯ್ತು ರಾಜಕೀಯ ಆಟ

ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬಹುತೇಕ ಸಮೀಕ್ಷೆಗಳು ಅತಂತ್ರ ಫಲಿತಾಂಶದ ಬಗ್ಗೆ ಮಾಹಿತಿ ನೀಡಿವೆ. ಜೆ.ಡಿ.ಎಸ್. ಕಿಂಗ್ ಮೇಕರ್ ಆಗಲಿದೆ ಎಂದು ಹೇಳಲಾಗಿದೆ.

ಅತಂತ್ರ ಫಲಿತಾಂಶ ಬಂದಲ್ಲಿ ಗೋವಾದಲ್ಲಿ ಅಧಿಕಾರ ಕಳೆದುಕೊಂಡಂತೆ ಕರ್ನಾಟಕದಲ್ಲಿಯೂ ಅಧಿಕಾರ ತಪ್ಪಬಹುದೆಂಬ ಆತಂಕದಲ್ಲಿರುವ ಕಾಂಗ್ರೆಸ್ ನಿನ್ನೆಯೇ ಕೇಂದ್ರ ನಾಯಕರಾದ ಗುಲಾಂ ನಬೀ ಆಜಾದ್ ಮತ್ತು ಅಶೋಕ್ ಗೆಹ್ಲೊಟ್ ಅವರನ್ನು ರಾಜ್ಯಕ್ಕೆ ಕಳಿಸಿದೆ. ಅಗತ್ಯವಾದಲ್ಲಿ ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಇವರು ಮಾತುಕತೆ ನಡೆಸಲಿದ್ದಾರೆ.

ಪದ್ಮನಾಭನಗರದ ನಿವಾಸದಲ್ಲಿರುವ ಗೌಡರು ಒತ್ತಡ ನಿವಾರಣೆಗೆ ಯೋಗ ಮಾಡಿದ್ದು, ಬೆಳಿಗ್ಗೆಯೇ ಪೂಜೆ ಮುಗಿಸಿ, ರಾಜಕೀಯ ವಿದ್ಯಮಾನಗಳ ಬಗ್ಗೆ ಆಪ್ತರೊಂದಿಗೆ ಚರ್ಚಿಸಿದ್ದಾರೆ. ಫಲಿತಾಂಶದ ಮಾಹಿತಿ ವೀಕ್ಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...