alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರದ ನಿಲುವು ಸರಿಯಿದೆ ಎಂದ ದೇವೇಗೌಡರು

devegowda h dರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿರುವುದರಿಂದ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಬಳಸಿಕೊಳ್ಳುತ್ತೇವೆ ಎಂದು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಕೈಗೊಂಡ ನಿರ್ಣಯ ಸರಿಯಾಗಿದೆ. ಈ ನಿರ್ಣಯದಿಂದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅಗೌರವ ತೋರಿದಂತಾಗುವುದಿಲ್ಲವೆಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಹರಿಸದಿರುವ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಿದರಲ್ಲದೆ ಮತ್ತೇ ಮೂರು ದಿನಗಳ ಕಾಲ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಇಂದು ನಡೆದ ಸರ್ವ ಪಕ್ಷ ಸಭೆಗೆ ಬಿಜೆಪಿ ನಾಯಕರು ಹಾಜರಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ದೇವೇಗೌಡರು, ತಮಿಳುನಾಡು ತನ್ನ ಬೆಳೆ ಒಣಗುತ್ತಿದೆ ಎಂಬ ಕಾರಣವೇಳಿ ನೀರು ಹರಿಸಲು ನ್ಯಾಯಾಲಯವನ್ನು ಕೋರುತ್ತಿದೆ. ಕೇವಲ ಮೂರು ದಿನಗಳಲ್ಲಿ ಬೆಳೆ ಒಣಗುತ್ತದೆ ಎಂಬುದು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲೇ ಕೇಳಿಲ್ಲ, ಕಂಡಿಲ್ಲವೆಂದರು. ತಮಿಳುನಾಡಿನಲ್ಲಿ ಅಮ್ಮ ವಾಟರ್ ನೀಡಲಾಗುತ್ತಿದೆ. ಆದರೆ ನಮಗೆ ಇಲ್ಲಿ ಅದನ್ನು ಕೊಡುವವರು ಯಾರು ಎಂದು ಪ್ರಶ್ನಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...