alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಗಾಂಧಿಗೆ ಗೌಡರು ತಿರುಗೇಟು ನೀಡಿದ್ದೀಗೆ….

ರಾಮನಗರ: ಜೆ.ಡಿ.ಎಸ್. ಪಕ್ಷದ ಕುರಿತಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿರುಗೇಟು ನೀಡಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ಕೋಟೆ ಮೈದಾನದಲ್ಲಿ ಇಂದು ನಡೆದ ಜೆ.ಡಿ.ಎಸ್. ವಿಕಾಸಪರ್ವ ಸಮಾವೇಶದಲ್ಲಿ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಮಾತನಾಡಿ, ರಾಜ್ಯದಲ್ಲಿ ಜೆ.ಡಿ.ಎಸ್. ಜಾತಿಯ ಸಮಾನತೆ ಕಾಪಾಡುತ್ತಿದೆ. ರಾಹುಲ್ ಗಾಂಧಿಗೆ ರಾಜಕೀಯದ ಪೂರ್ಣ ಅರಿವು ಇಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅತಿರೇಕದ ಮಾತುಗಳನ್ನಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂಬುದನ್ನು ಹುಡುಕುವ ಪರಿಸ್ಥಿತಿ ಇದೆ. ಅನೇಕ ರಾಜ್ಯಗಳಲ್ಲಿ ಪಕ್ಷಕ್ಕೆ ನೆಲೆ ಇಲ್ಲವಾಗಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲಿದೆ. ಇದನ್ನು ರಾಹುಲ್ ಗಾಂಧಿ ಅರಿಯಲಿ. ತಮ್ಮ ಕೈಗೆ ಚೀಟಿ ಬರೆದುಕೊಟ್ಟವರು ಯಾರು ಎಂಬುದರ ಬಗ್ಗೆ ತಿಳಿಯಲಿ ಎಂದು ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲು ಏನಾಗಿದ್ದರು ಎಂಬುದನ್ನು ಮರೆಯಬಾರದು. ಪಕ್ಷವನ್ನು, ನಮ್ಮನ್ನು ಟೀಕಿಸುವವರು ಮೊದಲು ಅವರ ಬಗ್ಗೆ ತಿಳಿದುಕೊಳ್ಳಲಿ ಎಂದು ಗುಡುಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...