alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಬಾಂಬ್ ಸಿಡಿಸಿದ ದೇವೇಗೌಡರು

gowdaru

ಬೆಂಗಳೂರು: ಬಿ.ಬಿ.ಎಂ.ಪಿ.ಯಲ್ಲಿ ಮೇಯರ್ ಸ್ಥಾನವನ್ನು ನಮಗೆ ಬಿಟ್ಟುಕೊಡುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಜೆ.ಡಿ.ಎಸ್. ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು ಪದ್ಮನಾಭನಗರದಲ್ಲಿನ ತಮ್ಮ ನಿವಾಸದಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಪೋರೇಟರ್ ಗಳು, ಮುಖಂಡರೊಂದಿಗೆ ಚರ್ಚಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಕಳೆದ ಸಲ ಮೇಯರ್ ಸ್ಥಾನವನ್ನು ಬಿಟ್ಟುಕೊಡಲಾಗಿತ್ತು. ಅವರು ಈ ಬಾರಿ ಜೆ.ಡಿ.ಎಸ್.ಗೆ ಮೇಯರ್ ಸ್ಥಾನ ಬಿಟ್ಟುಕೊಡಲಿ. ಬಿ.ಬಿ.ಎಂ.ಪಿ.ಯಲ್ಲಿ ಜೆ.ಡಿ.ಎಸ್.ನ 14 ಕಾರ್ಪೋರೇಟರ್ ಗಳು ಸೇರಿದಂತೆ 24 ಮತಗಳಿವೆ ಎಂದು ಹೇಳಿದ್ದಾರೆ.

ಕಳೆದ ಅವಧಿಯಲ್ಲಿ ಮೇಯರ್ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿತ್ತು. 12 ಸ್ಥಾಯಿ ಸಮಿತಿಗಳಿದ್ದರೂ, ಕೇವಲ 2 ಸಮಿತಿಗಳನ್ನು ಜೆ.ಡಿ.ಎಸ್.ಗೆ ನೀಡಲಾಗಿತ್ತು. ಈಗ ಮೇಯರ್ ಸ್ಥಾನ ನಮಗೇ ಬಿಟ್ಟುಕೊಡಲಿ ಎಂದಿರುವ ಗೌಡರು, ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಸಚಿವ ರಾಮಲಿಂಗಾರೆಡ್ಡಿ ಮೈತ್ರಿ ಮುಂದುವರೆಸುವಂತೆ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದು, ಬಿ.ಜೆ.ಪಿ. ಮುಖಂಡರು ಕೂಡ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈಗ ಗೌಡರು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...