alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ.ಜೆ.ಪಿ. ಆಪರೇಷನ್ ಕಮಲ ನಡೆಸಬಹುದು’

ಬೆಂಗಳೂರು: ಜೆ.ಡಿ.ಎಸ್.ಗೆ ಕಾಂಗ್ರೆಸ್ ಬೆಂಬಲ ನೀಡಿದ್ದು, ಎರಡೂ ಪಕ್ಷಗಳ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಮನವಿ ಸ್ವೀಕರಿಸಿದ ರಾಜ್ಯಪಾಲರು ಚುನಾವಣಾ ಆಯೋಗದಿಂದ ವಿಜೇತರ ವಿವರ ಬಂದ ಕೂಡಲೇ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ನಡುವೆ ಬಿ.ಜೆ.ಪಿ. ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ, ಅತಿದೊಡ್ಡ ಪಕ್ಷವಾಗಿರುವ ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕು. 2 ದಿನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

104 ಸ್ಥಾನ ಗಳಿಸಿರುವ ಬಿ.ಜೆ.ಪಿ. ಹೇಗೆ ಬಹುಮತ ಸಾಬೀತುಪಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದ್ದು, ಆಪರೇಷನ್ ಕಮಲ ನಡೆಸುವ ಸಾಧ್ಯತೆ ಇದೆ.

ರಾಜ್ಯಪಾಲರ ಭೇಟಿ ಬಳಿಕ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಈ ಕುರಿತಾಗಿಯೇ ಮಾತನಾಡಿದ್ದಾರೆ. ಬಿ.ಜೆ.ಪಿ. 2008 ರಲ್ಲಿ ಆಪರೇಷನ್ ಕಮಲ ನಡೆಸಿದಂತೆ ಈ ಬಾರಿಯೂ ನಡೆಸಬಹುದೆಂದು ಹೇಳಿದ್ದಾರೆ. ಅವರು ಆಪರೇಷನ್ ಕಮಲ ನಡೆಸುವುದೇ ಇಲ್ಲವೆಂದು ನಾವು ಹೇಳಲ್ಲ. ನಾವು ಸರ್ಕಾರ ರಚಿಸುತ್ತೇವೆ. ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮೈತ್ರಿ ಸರ್ಕಾರ ರಚನೆಗೆ ಒಪ್ಪಿಗೆ ನೀಡಲಾಗಿದ್ದು, ರಾಜ್ಯಪಾಲರಿಗೆ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...