alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿಗೆ ಹೆಚ್.ಡಿ.ಕೆ. ಅಧಿಕೃತ ಪ್ರವೇಶ

hd-k

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಉದ್ದೇಶದಿಂದ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಅಧಿಕೃತ ಪ್ರವೇಶ ಮಾಡಿದ್ದಾರೆ.

ಹುಬ್ಬಳ್ಳಿಯ ಭೈರಿದೇವರಕೊಪ್ಪದ ಮಾಯಕಾರ ಕಾಲೋನಿಯಲ್ಲಿ ಮನೆ ಮಾಡಿದ್ದಾರೆ. ಈ ಹಿಂದೆಯೇ ಹುಬ್ಬಳ್ಳಿಯಲ್ಲಿ ಮನೆ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಸೂಕ್ತ ಮನೆಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಅಧಿಕೃತವಾಗಿ ಗೃಹ ಪ್ರವೇಶ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಜೆ.ಡಿ.ಎಸ್. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖರಾಗಿರುವ ಕುಮಾರಸ್ವಾಮಿ, ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಲು ಮುಂದಾಗಿದ್ದಾರೆ.

ತಿಂಗಳಲ್ಲಿ 10-13 ದಿನಗಳ ಕಾಲ ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದರೊಂದಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಡ ಇದ್ದು, ಈ ಕುರಿತಂತೆ ಚರ್ಚೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...