alex Certify
ಕನ್ನಡ ದುನಿಯಾ       Mobile App
       

Kannada Duniya

ಅಚ್ಚರಿಯ ನಿರ್ಧಾರ ಕೈಗೊಂಡ್ರಾ ಹೆಚ್.ಡಿ.ಕೆ.?

ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದೆಲ್ಲೆಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ನಾನು ಮತ್ತು ಹೆಚ್.ಡಿ. ರೇವಣ್ಣ ಹೊರತುಪಡಿಸಿ, ಬೇರೆಯವರು ಸ್ಪರ್ಧಿಸುವುದಿಲ್ಲ ಎಂದು ಹೆಚ್.ಡಿ.ಕೆ. ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ಹೆಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಮತ್ತು ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಅವರ ಸ್ಪರ್ಧೆಗೆ ಒತ್ತಡ ಕೇಳಿ ಬಂದಿದೆ.

ಈಗಾಗಲೇ ಸ್ಪಷ್ಟನೆ ನೀಡಿರುವಂತೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರ ಒತ್ತಡದ ಹಿನ್ನಲೆಯಲ್ಲಿ ತಾವೇ ಸ್ಪರ್ಧಿಸಲು ಯೋಜಿಸಿದ್ದಾರೆ.

ರಾಮನಗರ ಕ್ಷೇತ್ರದ ಜೊತೆಗೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್.ಡಿ.ಕೆ. ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಪಕ್ಷದ ಕಾರ್ಯಕರ್ತರಿಂದ ಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ. ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಭಾವಿ ಮುಖ್ಯಮಂತ್ರಿ ಎಂದು ಬಿಂಬಿತರಾಗಿರುವುದರಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಕಾರ್ಯಕರ್ತರು ಸಲಹೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...