alex Certify
ಕನ್ನಡ ದುನಿಯಾ       Mobile App
       

Kannada Duniya

‘ಯುವತಿಗೆ ಸೊಂಟದ ಕೆಳಗಿನ ಭಾಷೆ ಬಳಸಿದ ಉಗ್ರಪ್ಪ’

hdk-new

ಬೆಂಗಳೂರು: ಅತ್ಯಾಚಾರ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪನವರು, ಲೈಂಗಿಕ ಕಿರುಕುಳಕ್ಕೆ ಒಳಗಾಗಿ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುವ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ ದೂರು ನೀಡಲು ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪನವರ ಬಳಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಆಕೆಯ ದೂರನ್ನು ಆಲಿಸುವ ಬದಲು, ಆಕೆಯೊಂದಿಗೆ ಅನುಚಿತವಾಗಿ ಮಾತನಾಡಿದ್ದಾರೆ. ಆಕೆಯನ್ನು ಕೆಲಸದಿಂದ ತೆಗೆದು ಹಾಕಿದ್ದು, ಈ ಕುರಿತ ದೂರು ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪವನ್ನು ತಳ್ಳಿಹಾಕಿರುವ ಉಗ್ರಪ್ಪನವರು, ರಾಜಕೀಯವಾಗಿ ತಮ್ಮ ವಿರುದ್ಧ ಆರೋಪಿಸಲು ಏನೂ ಇಲ್ಲದ ಕಾರಣ, ಇಂತಹ ಆರೋಪ ಮಾಡಿದ್ದಾರೆ. ಈ ಮೂಲಕ ಕೀಳುಮಟ್ಟದ ರಾಜಕೀಯ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...