alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶ್ವಾಸಮತದ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಎದುರಾಯ್ತು ಸಂಕಷ್ಟ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಳೆ ವಿಶ್ವಾಸಮತ ಯಾಚನೆ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಹೊಸ ಸಮಸ್ಯೆಯೊಂದು ತಲೆದೋರಿದೆ.

ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಶಾಸಕ ಸ್ಥಾನಕ್ಕೆ ಈಗ ಸಂಚಕಾರ ಬರದೆಯೇ ಎಂಬ ಪ್ರಶ್ನೆ ಎಲ್ಲರ ಮುಂದಿದೆ. ಮೇ 22ರಂದು ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ, ಜಿಲ್ಲಾಧಿಕಾರಿಗಳಿಗೆ ಹೆಚ್.ಕೆ. ಪಾಟೀಲ್ ವಿರುದ್ಧ ಚುನಾವಣಾ ಅಕ್ರಮ ದೂರು ದಾಖಲಿಸಿದ್ದರು.

ನಕಲಿ ಮತದಾನ ಹಾಗೂ ಮರಣ ಹೊಂದಿದವರ ಹೆಸರಿನಲ್ಲಿ ಮತದಾನ ಮಾಡಿಸಿರುವ ಕುರಿತು ದಾಖಲೆಗಳ ಸಹಿತ ಅವರು ದೂರು ನೀಡಿದ್ದರು. ಗದಗ ಜಿಲ್ಲಾಧಿಕಾರಿ ಮನೋಜ್ ಜೈನ್ ಈ ದೂರನ್ನು ಈಗ ರಾಜ್ಯ ಚುನಾವಣಾ ಆಯೋಗಕ್ಕೆ ರವಾನಿಸಿದ್ದು, ಹೆಚ್.ಕೆ. ಪಾಟೀಲ್ ಶಾಸಕ ಸ್ಥಾನದ ಮೇಲೆ ತೂಗುಗತ್ತಿ ಇಟ್ಟಂತಾಗಿದೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಅನಿಲ್ ಮೆಣಸಿನಕಾಯಿ ಅತ್ಯಂತ ಕಡಿಮೆ ಮತಗಳ ಅಂತರದಿಂದ ಹೆಚ್.ಕೆ. ಪಾಟೀಲ್ ವಿರುದ್ಧ ಪರಾಭವಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...