alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ಶುರುವಾಯ್ತು ಪೈಪೋಟಿ

vidhan-ss

ಬೆಂಗಳೂರು: ರಾಸಲೀಲೆ ಸಿ.ಡಿ. ಬಹಿರಂಗವಾದ ಕಾರಣಕ್ಕೆ, ಹೆಚ್.ವೈ. ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಲಾಬಿ ಶುರುವಾಗಿದೆ.

ಹೊಸದುರ್ಗ ಶಾಸಕ ಗೋವಿಂದಪ್ಪ, ಹೊಸಕೋಟೆ ಶಾಸಕ ನಾಗರಾಜ್ ಹಾಗೂ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಹೆಚ್.ಎಂ. ರೇವಣ್ಣ ಸಚಿವ ಸ್ಥಾನದ ಆಕಾಂಕ್ಷಿಗಳಾದ್ದಾರೆ. ಇವರೊಂದಿಗೆ ಮಾಜಿ ಸಚಿವರಾದ ಮೋಟಮ್ಮ ಹಾಗೂ ಎಸ್.ಆರ್. ಪಾಟೀಲ್, ಶಾಸಕರಾದ ಸಿ.ಎಸ್. ಶಿವಳ್ಳಿ, ಬಿ.ಬಿ. ಚಿಮ್ಮನಕಟ್ಟಿ ಮೊದಲಾದವರು ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಬಾರಿ 14 ಮಂದಿಯನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡ ಸಂದರ್ಭದಲ್ಲಿ ಹೆಚ್.ಎಂ. ರೇವಣ್ಣ ಸಚಿವರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಸಂಪುಟ ಸೇರಿರಲಿಲ್ಲ.

ಈಗ ಮೇಟಿ ಅವರಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಸದ್ಯಕ್ಕೆ ಸಚಿವ ಸ್ಥಾನ ಭರ್ತಿ ಮಾಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...