alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ‘ಆರೋಗ್ಯ ಕರ್ನಾಟಕ’ ಯೋಜನೆಯಲ್ಲಿ ಎಚ್1 ಎನ್1 ಸೇರ್ಪಡೆ

ರಾಜ್ಯದಲ್ಲಿ ಎಚ್ 1 ಎನ್ 1 ಸೋಂಕು ಕಾಣಿಸಿಕೊಂಡಿದ್ದು, ಈವರೆಗೆ 19 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಸಾವಿರಾರು ಮಂದಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇದರ ಮಧ್ಯೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಚ್ 1 ಎನ್ 1 ಚಿಕಿತ್ಸೆ ಸೇರ್ಪಡೆಗೊಂಡಿಲ್ಲದಿರುವ ಕಾರಣ ಈ ಯೋಜನೆಯಡಿ ಸೋಂಕು ಪೀಡಿತರು ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ.

ಇದೀಗ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಚ್1 ಎನ್1 ರೋಗಕ್ಕೂ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...