alex Certify
ಕನ್ನಡ ದುನಿಯಾ       Mobile App
       

Kannada Duniya

ಮರಳಿ ಬಿ.ಜೆ.ಪಿ. ಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ

ಹಾವೇರಿ: ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಇಂದು ಸ್ಪೀಕರ್ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿದ ಶ್ರೀನಿವಾಸ ಶೆಟ್ಟಿ ರಾಜೀನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ.

3 ಸಲ ಬಿ.ಜೆ.ಪಿ.ಯಿಂದ ಶಾಸಕರಾಗಿದ್ದ ಅವರು ಕಳೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಈಗ ಮತ್ತೆ ಬಿ.ಜೆ.ಪಿ. ಸೇರಲು ಮುಂದಾಗಿದ್ದಾರೆ.

ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಯಾವುದೇ ಷರತ್ತು ಇಲ್ಲದೇ ಬಿ.ಜೆ.ಪಿ. ಸೇರುತ್ತಿದ್ದೇನೆ. ದಿನಾಂಕವಿನ್ನೂ ನಿಗದಿಯಾಗಿಲ್ಲ. ಕಾರ್ಯಕರ್ತರು, ಹಿತೈಷಿಗಳ ಸಲಹೆಯಂತೆ ಬಿ.ಜೆ.ಪಿ. ಸೇರುತ್ತಿರುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...