alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಬಾರಿ ಹಂಪಿ ಉತ್ಸವ ನಡೆಯುವುದು ‘ಡೌಟ್’

ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಇರುವ ಕಾರಣ ಈ ಬಾರಿಯ ಹಂಪಿ ಉತ್ಸವ ನಡೆಸಬೇಕೇ ಬೇಡವೇ ಎಂಬುದರ ಕುರಿತು ಬಳ್ಳಾರಿ ಜಿಲ್ಲೆಯ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್, ಸೋಮವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜಿಲ್ಲೆಯ ಏಳು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಇಂತಹ ಸಂದರ್ಭದಲ್ಲಿ ಹಂಪಿ ಉತ್ಸವ ನಡೆಸಬೇಕೇ ಎಂಬ ಪ್ರಶ್ನೆ ಈಗ ಮೂಡಿದೆ ಎಂದರು.

ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ಕುರಿತಂತೆ ಪ್ರತಿಕ್ರಿಯಿಸಿದ ಶಿವಕುಮಾರ್, ಜಿಲ್ಲೆಯಿಂದ ಆರು ಮಂದಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಸಂಸದರನ್ನಾಗಿ ನಮ್ಮ ಪಕ್ಷದವರನ್ನೇ ಜಿಲ್ಲೆಯ ಜನತೆ ಆಯ್ಕೆ ಮಾಡಿದ್ದಾರೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಒಂದು ಸಚಿವ ಸ್ಥಾನ ಖಚಿತ. ಆದರೆ ಯಾರಿಗೆ ನೀಡಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲವೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...