alex Certify
ಕನ್ನಡ ದುನಿಯಾ       Mobile App
       

Kannada Duniya

ಹಾನಗಲ್ ನಲ್ಲಿ 2 ಎ.ಟಿ.ಎಂ. ಲೂಟಿ

hangal

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಗ್ಯಾಸ್ ಕಟರ್ ಬಳಸಿ, 2 ಎ.ಟಿ.ಎಂ.ನಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ದೋಚಲಾಗಿದೆ.

ಸಿಂಡಿಕೇಟ್ ಬ್ಯಾಂಕ್ ಮತ್ತು ಎಸ್.ಬಿ.ಎಂ. ಬ್ಯಾಂಕಿನ ಎಟಿಎಂ ಗೆ ತಡರಾತ್ರಿ ನುಗ್ಗಿದ ದುಷ್ಕರ್ಮಿಗಳು, ಗ್ಯಾಸ್ ಕಟರ್ ಬಳಸಿ, ಎ.ಟಿ.ಎಂ. ಯಂತ್ರವನ್ನು ಕಟ್ ಮಾಡಿದ್ದಾರೆ.

ಅದರಲ್ಲಿದ್ದ, ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಬ್ಯಾಂಕಿನ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾನಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...