alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಕ್ಷೇತ್ರ ಬದಲಿಸಲಿರುವ ಹರತಾಳು ಹಾಲಪ್ಪ, ಸಾಗರದಿಂದ ಸ್ಪರ್ಧೆ

ಶಿವವೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತೆ ಕ್ಷೇತ್ರ ಬದಲಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಾಗರ ವಿಧಾನಸಭೆ ಕ್ಷೇತ್ರದಿಂದ ಅವರು ಕಣಕ್ಕಿಳಿಯಲಿದ್ದಾರೆ.

ಹೊಸನಗರ ಕ್ಷೇತ್ರದಿಂದ ಹರತಾಳು ಹಾಲಪ್ಪ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್ ವಿಂಗಡಣೆಯ ಕಾರಣದಿಂದ ಹೊಸನಗರ ಕ್ಷೇತ್ರ ಪಕ್ಕದ ಕ್ಷೇತ್ರಗಳಿಗೆ ಸೇರಿದೆ. ಇದರಿಂದ ಹರತಾಳು ಹಾಲಪ್ಪ ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರೂ ಆಗಿದ್ದರು.

ಆದರೆ, ಕಾರಣಾಂತರದಿಂದ ಅವರು ರಾಜೀನಾಮೆ ನೀಡಿದ್ದರು. ಕಳೆದ ಚುನಾವಣೆಯಲ್ಲಿ ಅವರು ಸೊರಬ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಿ.ಜೆ.ಪಿ. ಸೇರಿದ್ದು, ಅವರು ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.

ಈಗ ಹಾಲಪ್ಪ ಸಾಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ನಿನ್ನೆ ತೀರ್ಥಹಳ್ಳಿ ತಾಲ್ಲೂಕಿನ ಆಲಸೆ ಶ್ರೀ ಚಂಡಿಕೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು, ವರಿಷ್ಠರ ಸೂಚನೆಯಂತೆ ಸಾಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ. ಸಾಗರ ಹೊರತಾಗಿ ಬೇರೆ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ಸಾಗರ ಕ್ಷೇತ್ರದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬಿ.ಜೆ.ಪಿ.ಯಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದು, ಮುಂದೇನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...