alex Certify
ಕನ್ನಡ ದುನಿಯಾ       Mobile App
       

Kannada Duniya

ಭಗವದ್ಗೀತೆಯನ್ನು ಸುಡುವ ಮೂಲಕ ಪ್ರತಿಭಟನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರು ಮೈಸೂರಿನಲ್ಲಿ ಭಗವದ್ಗೀತೆಯನ್ನು ಸುಟ್ಟಿರುವ ಘಟನೆ ನಡೆದಿದೆ.

ಯುವ ಹೋರಾಟಗಾರ ಹಾರೋಹಳ್ಳಿ ರವೀಂದ್ರ ಎಂಬುವವರು ಭಗವದ್ಗೀತೆಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದು, ಈ ದೃಶ್ಯವನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಕೂಡ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣೇಶ್ವರ ರಾವ್, ಭಗವದ್ಗೀತೆ ಪ್ರತಿ ಸುಟ್ಟು ಹಾಕಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು, ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದು ಧೃಢಪಟ್ಟರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುವ ಈ ಕೃತ್ಯ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...