alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

hasanamba-darshan

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ನೀಡುವ ಹಾಸನಾಂಬೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದೆ. ಅಕ್ಟೋಬರ್ 20 ರಿಂದ ದೇವಿ ದರ್ಶನ ನೀಡುತ್ತಿದ್ದು, ಇನ್ನೆರಡು ದಿನ ಬಾಕಿ ಇದೆ.

ದೀಪಾವಳಿ ಹಬ್ಬದ ಪ್ರಯುಕ್ತ ಸಾಲು, ಸಾಲು ರಜೆ ಇದ್ದ ಕಾರಣ, ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಭೇಟಿ ಕೊಟ್ಟಿದ್ದಾರೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಿಂದಲೂ ಭಕ್ತರು ಆಗಮಿಸಿ, ದರ್ಶನ ಪಡೆದುಕೊಂಡಿದ್ದಾರೆ.

ಹೀಗೆ ಬಂದ ಭಕ್ತರು, ಹರಕೆ ತೀರಿಸಿ ಕಾಣಿಕೆ ಸಲ್ಲಿಸಿದ್ದು, ಸುಮಾರು 1.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಸಚಿವ ಎ. ಮಂಜು, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ನಟ ಶಿವರಾಜ್ ಕುಮಾರ್ ದಂಪತಿ, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ದರ್ಶನ ಪಡೆದುಕೊಂಡಿದ್ದಾರೆ.

ದೇವಾಲಯದಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಹಾಸನಾಂಬೆ ದರ್ಶನಕ್ಕೆ 2 ದಿನವಷ್ಟೇ ಬಾಕಿ ಇರುವುದರಿಂದ ಕೊನೆಯ ದಿನದಲ್ಲಿ ಭಾರೀ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದೇಗುಲದಲ್ಲಿನ ದೀಪ ಸದಾ ಉರಿಯುತ್ತಿರುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...