alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಸನಾಂಬೆ ದರ್ಶನಕ್ಕೆ ಜನಸಾಗರ

hasanamba

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ.

ಇಂದಿನಿಂದ ನವೆಂಬರ್ 1 ರ ವರೆಗೆ ದೇವಿಯ ದರ್ಶನ ಕಣ್ತುಂಬಿಕೊಳ್ಳುವ ಭಾಗ್ಯ ಭಕ್ತರಿಗೆ ಸಿಗಲಿದೆ. ವರ್ಷದ ಹಿಂದೆ ಹಚ್ಚಿಟ್ಟ ದೀಪ ಉರಿಯುವುದನ್ನು ನೋಡಲು ಭಕ್ತರ ದಂಡೇ ನೆರೆದಿದೆ. ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರತಿ ವರ್ಷ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಹಚ್ಚಿಟ್ಟ ದೀಪ ಆರುವುದಿಲ್ಲ. ಹೂವು ಬಾಡುವುದಿಲ್ಲ ಎನ್ನಲಾಗಿದ್ದು, ನವೆಂಬರ್ 1 ರ ವರೆಗೆ ದೇವಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.

ಹಾಸನಾಂಬೆ ದೇವಿ ದರ್ಶನಕ್ಕೆ ಕರ್ನಾಟಕ ಮಾತ್ರವಲ್ಲದೇ, ದೇಶ, ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...